ಭಾರೀ ಮಳೆಗೆ ಮದನಿ ನಗರದಲ್ಲಿ ಮನೆಯ ಮೇಲೆ ಕುಸಿದುಬಿದ್ದ ಆವರಣ ಗೋಡೆ; ಇಬ್ಬರು ಮಕ್ಕಳ ಸಹಿತ ದಂಪತಿ ಮೃತ್ಯು
Wednesday, June 26, 2024
ಉಳ್ಳಾಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಆವರಣ ಗೋಡೆ (ಕಂಪೌಂಡ್) ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ದಂಪತಿ ಮೃತಪಟ್ಟ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ.
ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.
ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ ನಾಲ್ವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.