ಉದ್ಯಾವರ: ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್ ಲಾರಿ ಡಿಕ್ಕಿ: ಚಾಲಕ ಗಂಭೀರ
Saturday, June 8, 2024
ಉಡುಪಿ: ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಗೂಡ್ಸ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ತಾಂತ್ರಿಕ ಸಮಸ್ಯೆಯಿಂದ ರಾಷ್ಟ್ರೀಯ ಹೆದ್ದಾರಿ ನಡುವೆಯೇ ಲಾರಿಯೊಂದು ಕೆಟ್ಟು ನಿಂತಿತ್ತು. ಹಿಂದಿನಿಂದ ಬಂದ ಮತ್ತೊಂದು ಲಾರಿಯ ಚಾಲಕ ಕೆಟ್ಟು ನಿಂತಿದ್ದ ಲಾರಿಯನ್ನು ಗಮನಿಸದೇ ಢಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಕಾಪು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.