ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಭರತ್ ಶೆಟ್ಟಿ ವಿರುದ್ಧ ಗುರುವಾರ ಕಾವೂರು ಜಂಕ್ಷನ್ ಬಳಿ ಇನಾಯತ್ ಅಲಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ
Wednesday, July 10, 2024
ಮಂಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ನಾಲಿಗೆ ಹರಿಬಿಟ್ಟ ಶಾಸಕ ಭರತ್ ಶೆಟ್ಟಿ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ, ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ (ಜು.11)ದಂದು ಸಂಜೆ 3:30ಕ್ಕೆ ಕಾವೂರು ಜಂಕ್ಷನ್ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ವ್ಯಾಪ್ತಿಯ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು, ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ಇನಾಯತ್ ಅಲಿ ವಿನಂತಿಸಿದ್ದಾರೆ.