
27.8 ಲಕ್ಷ ರೂಪಾಯಿ ಅನುದಾನದ ಸಾಂತೂರು ಕೊಪ್ಲ ವಿವೇಕ ಶಾಲಾ ಕೊಠಡಿ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Monday, July 8, 2024
ಸಾಂತೂರು ಕೊಪ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ 27.8 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಇಂದು ದಿನಾಂಕ 08-07-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ನಾಗೇಂದ್ರ ಪ್ರಭು, ಉಪಾಧ್ಯಕ್ಷರಾದ ಮರಿಯಮ್ಮ, ಮುದರಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಪ್ರಭು, ಬಾಲಚಂದ್ರ ಶೆಟ್ಟಿ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಾರಿಕಾ, ಶಾಲಾ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಮುಖ್ಯ ಶಿಕ್ಷಕರಾದ ಬಿ. ರಾಮಕೃಷ್ಣ ಭಟ್ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿತರಿದ್ದರು.