ಜೋರಾದ ಮಳೆಯ ಆರ್ಭಟ; ಉಡುಪಿ-ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕೂಗಳ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ

ಜೋರಾದ ಮಳೆಯ ಆರ್ಭಟ; ಉಡುಪಿ-ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕೂಗಳ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ

ಉಡುಪಿ: ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಜೊತೆಗೆ ಉಡುಪಿಯಲ್ಲಿ ಗುರುವಾರ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ಉಸುರುಗಟ್ಟಿ ಸಾವನ್ನಪ್ಪಿದ್ದರು. ಇತ್ತ ಉತ್ತರ ಕನ್ನಡದಲ್ಲೂ ಮಳೆಗೆ ಗುಡ್ಡ ಕುಸಿದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್​​​ ಆಗಿತ್ತು. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ 2 ಜಿಲ್ಲೆಯ ಆಯ್ದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಉಡುಪಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ. ಆದರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೂರು ತಾಲೂಕಿನಾದ್ಯಂತ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ. ಅಗತ್ಯಬಿದ್ದಲ್ಲಿ ಹೊನ್ನಾವರ ತಾಲೂಕಿನ ಶಾಲೆಗಳಿಗೂ ರಜೆ ನೀಡಲು ಸೂಚನೆ ನೀಡಿದ್ದಾರೆ. ನಾಳೆ ಮಳೆಯಿಂದ ಇನ್ನಷ್ಟು ಅವಾಂತರ ಆಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.

Ads on article

Advertise in articles 1

advertising articles 2

Advertise under the article