ಜುಲೈ 6ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಜುಲೈ 6ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಜುಲೈ 6ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಇದಕ್ಕೆ ಮೊದಲು ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಅವರು ಆದೇಶಿಸಿದ್ದರು.


Ads on article

Advertise in articles 1

advertising articles 2

Advertise under the article