ಮಾಧ್ಯಮಗಳು ಸಮಾಜದಲ್ಲಿನ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ; ʼವಾರ್ತಾಭಾರತಿʼಯ ಹಿರಿಯ ವರದಿಗಾರ ಬಿ.ಬಿ. ಶೆಟ್ಟಿಗಾರ್‌ಗೆ ಪತ್ರಿಕಾ ದಿನಾಚರಣೆಯ ಗೌರವ ಸನ್ಮಾನ

ಮಾಧ್ಯಮಗಳು ಸಮಾಜದಲ್ಲಿನ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ; ʼವಾರ್ತಾಭಾರತಿʼಯ ಹಿರಿಯ ವರದಿಗಾರ ಬಿ.ಬಿ. ಶೆಟ್ಟಿಗಾರ್‌ಗೆ ಪತ್ರಿಕಾ ದಿನಾಚರಣೆಯ ಗೌರವ ಸನ್ಮಾನ

ಉಡುಪಿ: ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳು ಸೇರಿದಂತೆ ಪ್ರತಿಯೊಂದು ಆಯಾಮಗಳನ್ನು ರಚನಾತ್ಮಕವಾಗಿ ರಚಿಸಿ, ಅವರುಗಳ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ಮಾಧ್ಯಮ ಗಳು ಕೆಲಸ ಮಾಡುತ್ತಿವೆಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.






ಉಡುಪಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪತ್ರಿಕೆಗಳು ವಿಶ್ವದಲ್ಲಿ ನಡೆಯುವ ಪ್ರಸ್ತುತ ಸುದ್ದಿಗಳು, ರಾಜಕೀಯ ಬೆಳವಣಿಗೆಗಳು, ಆವಿಷ್ಕಾರಗಳು ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಮಾಹಿತಿಯನ್ನು ಸ್ಪಷ್ಟವಾಗಿ ಸತ್ಯಾಸತ್ಯತೆಯೊಂದಿಗೆ ಕೊಡುವ ಕಾರ್ಯ ಮಾಡುತ್ತಿದೆ. ಇದರಿಂದ ಎಲ್ಲರಿಗೂ ಜ್ಞಾನಾರ್ಜನೆ ಹಾಗೂ ಮಾಹಿತಿಗಳು ತಲುಪುತ್ತವೆ ಎಂದರು.

ಕೋವಿಡ್ ಸಂದರ್ಭದಲ್ಲಿ ಹೆಚ್ಚು ಪತ್ರಿಕೆಗಳು ಸಂಕಷ್ಟಕ್ಕೀಡಾಗಿದ್ದು, ಕೋವಿಡ್ ನಂತರದ ದಿನಗಳಲ್ಲಿ ಚೇತರಿಸಿಕೊಳ್ಳುತ್ತಿದೆ. ಪತ್ರಿಕೆಗಳು ದಿನನಿತ್ಯದ ಮಾಹಿತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ವಿಷಯಗಳ ಕುರಿತು ಹಾಗೂ ಸಾರ್ವಜನಿ ಕರಿಗೆ ಅಗತ್ಯವಿರುವ ವಿಷಯಗಳನ್ನು ಸಹ ತಲುಪಿಸುತ್ತಿದ್ದು, ಆ ಮೂಲಕ ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಸುದ್ದಿ ಯನ್ನು ಬಿತ್ತರಿಸುವ ಕೆಲಸ ಪತ್ರಿಕೆಗಳು ಮಾಡುತ್ತಿವೆ.

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಭವ್ಯಾ ನಾಗರಾಜ್ ಉಪನ್ಯಾಸ ನೀಡಿ, ದಿನದಿಂದ ದಿನಕ್ಕೆ ಪತ್ರಿಕೋದ್ಯಮ ಬೆಳವಣಿಗೆ ಕಂಡುಕೊಳ್ಳುತ್ತಿದೆ. ಈ ಮಧ್ಯೆ ಅನೇಕ ಸವಾಲು ಗಳನ್ನು ಎದುರಿಸು ತ್ತಲೇ ಪತ್ರಿಕೋದ್ಯಮವು ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಪ್ರತಿದಿನ ಹೊಸತನ್ನು ಕಲಿಯಲು ಪತ್ರಿಕೋದ್ಯಮ ಪ್ರೇರೇಪಿ ಸುತ್ತದೆ. ಯಾವುದೇ ರೀತಿಯ ಸವಾಲನ್ನು ಎದುರಿಸಲು ಧೈರ್ಯವನ್ನು ತುಂಬುವ ಶಕ್ತಿ ಪತ್ರಿಕೋದ್ಯಮ ಕ್ಷೇತ್ರಕ್ಕಿದೆ ಎಂದರು.

ಈ ಸಂದರ್ಭ ʼವಾರ್ತಾಭಾರತಿʼ ಪತ್ರಿಕೆಯ ಹಿರಿಯ ವರದಿಗಾರ ಬಿ.ಬಿ. ಶೆಟ್ಟಿಗಾರ್ ಅವರಿಗೆ ಪತ್ರಿಕಾ ದಿನಾಚರಣೆ ಗೌರವದೊಂದಿಗೆ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ವಹಿಸಿದ್ದರು.

ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕಾಲೇಜಿನ ಕಲಾ ನಿಕಾಯದ ಡೀನ್ ಪ್ರೊ. ನಿಕೇತನಾ ಉಪಸ್ಥಿತರಿದ್ದರು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಅರಾಡಿ ಸನ್ಮಾನಿತರ ಪರಿಚಯ ಮಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿನಿ ಅಶ್ವಿನಿ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article