ಕಾರವಾರ; ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ; ಅಧಿಕಾರಿಗಳಿಗೆ ಏನೆಲ್ಲಾ ಸೂಚನೆ ನೀಡಿದ್ದಾರೆ ನೋಡಿ...

ಕಾರವಾರ; ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ; ಅಧಿಕಾರಿಗಳಿಗೆ ಏನೆಲ್ಲಾ ಸೂಚನೆ ನೀಡಿದ್ದಾರೆ ನೋಡಿ...

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಜನ ತತ್ತರಿಸಿಹೋಗಿದ್ದು, ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.


ಸೂಚನೆಗಳು ಇಲ್ಲಿದೆ ನೋಡಿ...

ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ  ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಪರಿಹಾರ ಒಗದಿಸಲು ತಕ್ಷಣ ಹಾನಿಯ ವರದಿ ಸಲ್ಲಿಸಿ.

ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ  ನೀರಿನಿಂದ ತೊಂದರೆಗೊಳಗಾಗುವ  ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ಮಾಡಿ. 

ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ತುರ್ತಾಗಿ ಪರಿಹಾರ ಕೊಡಬೇಕು. 

ಕೋಸ್ಟಲ್ ಲೈನ್ ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ದುರಸ್ತಿ ಮತ್ತು ಬದಲಾವಣೆಗೆ ಮಾಡಬೇಕು. 

ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಹೆದ್ದಾರಿ ಪ್ರಾಧಿಕಾರದವರು ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಇದು ಸರಿಯಿಲ್ಲ. 2016ಕ್ಕೆ ಕಾಮಗಾರಿ ಮುಕ್ತಾಯಗೊಳಿಸಬೇಕಿದ್ದರೂ ಸಹ ಇದುವರೆಗೆ ಮುಕ್ತಾಯಗೊಳಿಸದೇ ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ದಾರಿತಪ್ಪಿಸುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣವಾಗಿ ಪತ್ರ ಬರೆಯುತ್ತೇನೆ.

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ  ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿನ ಗ್ರಾಮಗಳಲ್ಲಿ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿಕೊಂಡು ಅಲ್ಲಿನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು.

ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ನಿರ್ವಹಿಸಬೇಕು.

Ads on article

Advertise in articles 1

advertising articles 2

Advertise under the article