ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಭೇಟಿ ನೀಡಿದ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್
Tuesday, July 9, 2024
ಕಾಪು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಮಂಗಳವಾರ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು.
2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅಭಿನಂದಿಸಿದರು.
ಪತ್ನಿ ದೇವಿಶಾ ಶೆಟ್ಟಿ ಜೊತೆ ಕಾಪುಗೆ ಆಗಮಿಸಿದ ಸೂರ್ಯಕುಮಾರ್ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.