ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಧರಣಿ
Friday, August 23, 2024
ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆಗೆ ಬುಧವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.
ನಗರದ ವೇಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆ ಬಳಿಯಿಂದ ಧಿಕ್ಕಾರ ಕೂಗಿಕೊಂಡು ಹೊರಟ ಮುಖಂಡರು ಮತ್ತು ಕಾರ್ಯಕರ್ತರು ಕಂಕನಾಡಿ ವೃತ್ತದಲ್ಲಿ ಸಭೆ ನಡೆಸಿದರು.
ಬಿಜೆಪಿ ಕಚೇರಿ ವರೆಗೆ ಮೆರವಣಿಗೆ ಮಾಡುವುದಾಗಿ ಮೊದಲು ಹೇಳಿದ್ದರೂ ಅದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ ಮೆರವಣಿಗೆಯನ್ನು ಕಂಕನಾಡಿಯಲ್ಲಿಮುಕ್ತಾಯಗೊಳಿಸಲಾಯಿತು.
ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್, ಮುಖಂಡರಾದ ಜೆ.ಆರ್ ಲೋಬೊ, ಎಂ.ಜಿ ಹೆಗಡೆ ಮತ್ತಿತರರು ಪಾಲ್ಗೊಂಡಿದ್ದರು.