ಉಚ್ಚಿಲ ಪೇಟೆಯಲ್ಲಿ ಉರಿಯದ ದಾರಿದೀಪಗಳು: ಎಸ್.ಡಿ.ಪಿ.ಐ.ಯಿಂದ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ
Monday, August 26, 2024
ಉಚ್ಚಿಲ: ಉಚ್ಚಿಲ ಪೇಟೆಯಲ್ಲಿ ಹಾದು ಹೋಗುವ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ಆಳವಡಿಸಿರುವ ದಾರಿದೀಪ ಕಳೆದ ಹಲವು ತಿಂಗಳುಗಳಿಂದ ಕೆಲಸ ಮಾಡದೇ ಇರುವುದನ್ನು ಖಂಡಿಸಿ ಸೊಶೀಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಚ್ಚಿಲ ಗ್ರಾಮ ಸಮಿತಿ ವತಿಯಿಂದ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಸ್ಥರು ಒಂದು ತಿಂಗಳ ಒಳಗಾಗಿ ದಾರಿ ದೀಪ ಹಾಕಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭ ಎಸ್.ಡಿ.ಪಿ.ಐ ಉಚ್ಚಿಲ ಗ್ರಾಮ ಸಮಿತಿ ಉಪಾಧ್ಯಕ್ಷರಾದ ಶರೀಫ್ 313 ಉಚ್ಚಿಲ, ಗ್ರಾಮ ಪಂಚಾಯತ್ ಸದಸ್ಯರಾದ ಆಸೀಫ್ ವೈ.ಸಿ,ಎಸ್.ಡಿ.ಪಿ.ಐ. ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಮಜೀದ್, ಎಸ್.ಡಿ.ಟಿ. ಯು. ಜಿಲ್ಲಾ ಕಾರ್ಯದರ್ಶಿ ಖಲೀಲ್ ಉಮರ್ ಮತ್ತು ಗ್ರಾಮ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.