ಆನ್‌ಲೈನ್‌ ಟ್ರೇಡಿಂಗ್‌ ವಂಚನೆ: 4 ಮಂದಿಯನ್ನು ಬಂಧಿಸಿದ ಇ.ಡಿ

ಆನ್‌ಲೈನ್‌ ಟ್ರೇಡಿಂಗ್‌ ವಂಚನೆ: 4 ಮಂದಿಯನ್ನು ಬಂಧಿಸಿದ ಇ.ಡಿ

ಬೆಂಗಳೂರು: ಆನ್‌ಲೈನ್‌ ಟ್ರೇಡಿಂಗ್‌ ಹೆಸರಲ್ಲಿ ಸೈಬರ್‌ ಹೂಡಿಕೆ ವಂಚನೆ ಮಾಡುತ್ತಿದ್ದ ಬೆಂಗಳೂರು ಮೂಲದ ಓರ್ವ ಸೇರಿದಂತೆ ನಾಲ್ವರು ಆರೋಪಿಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರನ್ನು ಶಶಿಕುಮಾರ್ (25), ಸಚಿನ್ (26), ಕಿರಣ್ ಎಸ್‌ಕೆ (25) ಮತ್ತು ಚರಣ್ ರಾಜ್ (26) ಎಂದು ಗುರುತಿಸಲಾಗಿದೆ. ಇವರು ಷೇರು ಮಾರುಕಟ್ಟೆಯಲ್ಲಿ ನಕಲಿ‌ ಕಂಪನಿಗಳ ಹೆಸರಲ್ಲಿ ಹಣಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. 

ನಕಲಿ ದಾಖಲೆ ನೀಡಿ ಹತ್ತಾರು ಬ್ಯಾಂಕ್ ಅಕೌಂಟ್ ತೆರೆದಿದ್ದರು. ಹಣ ವರ್ಗಾವಣೆ ಆದ ನಂತರ ಬೇರೆ ಬೇರೆ ಅಕೌಂಟ್‌ಗೆ ಟ್ರಾನ್ಸ್‌ಫರ್‌ ಮಾಡಿಕೊಳ್ಳುತ್ತಿದ್ದರು. ನಂತರ ಹಣ ಜಮಾ ಮಾಡಿದವರ ನಂಬರ್ ಬ್ಲಾಕ್ ಮಾಡುತ್ತಿದ್ದರು. ಈ ಬಗ್ಗೆ ಬೆಂಗಳೂರು ಸೈಬರ್ ಠಾಣೆಗಳಲ್ಲಿ ಹತ್ತಾರು ದೂರು ದಾಖಲಾಗಿದ್ದವು.

ಕೋಟ್ಯಂತರ ರೂಪಾಯಿ ಬೇನಾಮಿ ಹಣ ಟ್ರಾನ್ಸ್‌ಫರ್ ಆಗಿದ್ದ ಹಿನ್ನೆಲೆ ಇಡಿ ಅಧಿಕಾರಿಗಳಿಗೆ ಸೈಬರ್‌ ಕ್ರೈಂ ಪೊಲೀಸರು ಮಾಹಿತಿ ನೀಡಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ನಾಲ್ವರನ್ನು ಬಂಧಿಸಿ, ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಾಲ್ವರು ಆರೋಪಿಗಳನ್ನು ಏಳು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. 

Ads on article

Advertise in articles 1

advertising articles 2

Advertise under the article