ಬೆಂಗಳೂರಿನ ಜಿಗಣಿಯಲ್ಲಿ ಶಂಕಿತ ಉಗ್ರನ ಬಂಧನ; ಗುವಾಹಟಿಯಲ್ಲಿ ಐದು ಕಡೆ ಬಾಂಬ್ ಇಟ್ಟಿದ್ದ ಉಗ್ರ

ಬೆಂಗಳೂರಿನ ಜಿಗಣಿಯಲ್ಲಿ ಶಂಕಿತ ಉಗ್ರನ ಬಂಧನ; ಗುವಾಹಟಿಯಲ್ಲಿ ಐದು ಕಡೆ ಬಾಂಬ್ ಇಟ್ಟಿದ್ದ ಉಗ್ರ

ಬೆಂಗಳೂರು:  ಆನೇಕಲ್ ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. 

ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್​ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದ. ಬಳಿಕ ಶಂಕಿತ ಉಗ್ರ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದನು.

ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿದ ಅಸ್ಸಾಂ ಎನ್ಐಎ ಟೀಂ, ಶಂಕಿತ ಉಗ್ರನನ್ನು ಇದೀಗ ಬಂಧಿಸಿದೆ. ಬೆಂಗಳೂರಿನ ಜಿಗಣಿಯಲ್ಲಿ ವಾಸವಿದ್ದ ಈ ಶಂಕಿತ ಉಗ್ರ, ಇಲ್ಲಿಯೂ ಒಂದಷ್ಟು ಪ್ಲ್ಯಾನ್​ಗಳನ್ನು ನಡೆಸುತ್ತಿದ್ದ ಅನುಮಾನ ವ್ಯಕ್ತವಾಗಿದೆ. ಸದ್ಯ ಶಂಕಿತನನ್ನ ಬಂಧಿಸಿರೋ ಅಧಿಕಾರಿಗಳು, ಬಂಧಿತನಿಂದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಆತನನ್ನು ಎನ್ಐಎ ತಂಡ ಅಸ್ಸಾಂಗೆ ಕರೆದೊಯ್ದಿದೆ.

Ads on article

Advertise in articles 1

advertising articles 2

Advertise under the article