ಬೈಂದೂರಿನ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ನಿಧನ
Friday, September 27, 2024
ಉಡುಪಿ: ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.
ಇವರು 2008ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಸ್ನಾತಕೋತ್ತರ ಪದವಿಧದರಾಗಿರುವ ಇವರು ಉದ್ಯಮಿಯಾಗಿ ಹೆಸರು ಗಳಿಸಿದ್ದರು.