ಮಾನನಷ್ಟ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್'ಗೆ 15 ದಿನಗಳ ಜೈಲು ಶಿಕ್ಷೆ; 25 ಸಾವಿರ ರೂ. ದಂಡ

ಮಾನನಷ್ಟ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್'ಗೆ 15 ದಿನಗಳ ಜೈಲು ಶಿಕ್ಷೆ; 25 ಸಾವಿರ ರೂ. ದಂಡ

ಮುಂಬೈ: ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದೆ.

ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದ 100 ಕೋಟಿ ರೂ. ಹಗರಣದಲ್ಲಿ ತಾನು ಮತ್ತು ತನ್ನ ಪತಿ ಭಾಗಿಯಾಗಿದ್ದಾರೆ ಎಂದು ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ರಾವತ್ ಮಾಡಿದ್ದಾರೆ ಎಂದು ಆರೋಪಿಸಿ ಮೇಧಾ ಸೋಮಯ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜನಸಾಮಾನ್ಯರ ಮುಂದೆ ನನ್ನ ವರ್ಚಸ್ಸು ಹಾಳು ಮಾಡಲು ಆರೋಪ ಮಾಡಲಾಗಿದೆ ಎಂದು ಹೇಳಿದ್ದರು.

ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು, 25,000 ರೂ. ದಂಡ ವಿಧಿಸಿದೆ.

Ads on article

Advertise in articles 1

advertising articles 2

Advertise under the article