ಆಟವಾಡುತ್ತಿದ್ದ ವೇಳೆ ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಮಗು ಸಾವು

ಆಟವಾಡುತ್ತಿದ್ದ ವೇಳೆ ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಮಗು ಸಾವು

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಅಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದ್ದು, ಈ ವೇಳೆ ಮಗು ಆಟವಾಡುತ್ತವೇ ಬಾಟಲ್ ಮುಚ್ಚಳವನ್ನು ಬಾಯಿಗೆ ಹಾಕಿಕೊಂಡಿದೆ. ಕೆಲನಿಮಿಷಗಳಲ್ಲೇ ಮುಚ್ಚಳ ಮಗುವಿನ ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದ್ದು, ಈ ವೇಳೆ ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ.

ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಟೆಲ್‌ ಮುಚ್ಚಳ ನುಂಗಿದ ಕೂಡಲೇ ಮಗು ಉಸಿರಾಡಲು ಆಗದೆ ಒದ್ದಾಡಿದೆ, ಜೋರಾಗಿ ಅಳುವ ಸದ್ದು ಕೇಳಿ ಪೋಷಕರು ಬಂದಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಆದಾಗಲೇ ಮಗು ಸಾವನ್ನಪ್ಪಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article