ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್

ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್

ಬೆಂಗಳೂರು: ಜಾತಿ ಗಣತಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ. ಅದನ್ನ ಜಾರಿಗೊಳಿಸಲು ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್​​​ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು.

ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೆಯೇ ಆಗಲಿ ಎಂದು ಹರಿಪ್ರಸಾದ್ ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಣಾಳಿಕೆ ಬಗ್ಗೆ ಗೌರವ ಇರುವವರು. ಅವರು ಜಾತಿ ಗಣತಿಗೆ ಬೆಂಬಲ ಕೋಡಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲೇ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಆ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದು ರಾಹುಲ್ ಗಾಂಧಿಯವರೇ ಹೇಳಿದ್ದಾರೆ. ಅದೇ ರೀತಿ ಪ್ರಪಂಚ ತಲೆ ಕೆಳಗಾದರೆ ಆಗಲಿ, ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಬಿಳಲಿ ಯಾಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಹರಿಪ್ರಸಾದ್ ಈ ಹಿಂದೆ ಕೂಡ ಜಾತಿ ಗಣತಿ ಜಾರಿಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ, ಸರ್ಕಾರಕ್ಕೆ ಮುಜುಗರ ತರುವಂಥ ಹೇಳಿಕೆಗಳನ್ನೂ ಅನೇಕ ಬಾರಿ ನೀಡಿದ್ದಾರೆ. ಇದೀಗ ಜಾತಿ ಗಣತಿ ಕುರಿತ ಹರಿಪ್ರಸಾದ್ ಹೇಳಿಕೆ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.

ಜಾತಿಗಣತಿ ಜಾರಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಹೆಜ್ಜೆ ಇಡಬೇಕು. ಒಂದು ವರ್ಷ ಕಾಯುವುದು ಉತ್ತಮ ಎಂದು ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದರು. ಇದಕ್ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, ಜಾತಿಗಣತಿ ವಿಚಾರ ನಮ್ಮ ಪ್ರಣಾಳಿಕೆಯಲ್ಲೇ ಇದೆ. ರಾಹುಲ್ ಗಾಂಧಿ ಕೂಡ ಇದನ್ನ ಹೇಳಿದ್ದಾರೆ. ಡಿಕೆ ಸುರೇಶ್ ಪ್ರಣಾಳಿಕೆಯ ಬಗ್ಗೆ ತಿಳಿದುಕೊಂಡು ಮಾತನಾಡಿದರೋ ಇಲ್ಲವೋ ಎಂಬುದು ಗೊತ್ತಿಲ್ಲ. ಅವರು ಪ್ರಣಾಳಿಕೆ ಬಗ್ಗೆ ತಿಳಿದುಕೊಂಡು ಮಾತನಾಡುವುದು ಒಳ್ಳೆಯದು ಎಂದು ಹರಿಪ್ರಸಾದ್ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article