'ಉಡುಪಿ-ಉಚ್ಚಿಲ ದಸರಾ'ದಲ್ಲಿ ಮನಸೆಳೆದ ವಿವಿಧ ಸಾಂಸ್ಕೃತಿಕ-ಧಾರ್ಮಿಕ ಕಾರ್ಯಕ್ರಮ
Tuesday, October 8, 2024
ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ 'ಉಡುಪಿ-ಉಚ್ಚಿಲ ದಸರಾ'ದಲ್ಲಿ ಭಾಗವಹಿಸುತ್ತಿರುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೆಳಗ್ಗೆಯಿಂದ ರಾತ್ರಿವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೆಳೆದವು.
ಬೆಳಗ್ಗೆ 9ಕ್ಕೆ ಚಂಡಿಕಾ ಹೋಮ, 9.30ರಿಂದ 4.45ರ ಭಜನೆ, ಮಧ್ಯಾಹ್ನ 12ಕ್ಕೆ ನವದುರ್ಗೆಯರಿಗೆ ಮಹಾಮಂಗಳಾರತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5ರಿಂದ ಧಾರ್ಮಿಕ ಸಭೆ, ಸಂಜೆ 5.45ರಿಂದ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, 6.30ರಿಂದ ಸ್ಥಳೀಯ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನದ ಯಕ್ಷ ಕಲಾ ತಂಡದವರಿಂದ ಚಕ್ರ ಚಂಡಿಕೆ ಯಕ್ಷಗಾನ ಪ್ರದರ್ಶನ ನಡೆಯಿತು.