ಉಚ್ಚಿಲ ದಸರಾದಲ್ಲಿ ಜನರನ್ನು ಆಕರ್ಷಿಸುತ್ತಿರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು
Friday, October 11, 2024
ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ ಉಚ್ಚಿಲ ದಸರಾ 2024ರಲ್ಲಿ ದಿನನಿತ್ಯ ನಡೆಯುತ್ತಿರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ಆಕರ್ಷಿಸುತ್ತಿದೆ.
ಸ್ಥಳೀಯರಿಂದ ಹಿಡಿದು ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಪ್ರಸಿದ್ಧ ಕಲಾವಿದರ ಯಕ್ಷಗಾನ, ನೃತ್ಯ ರೂಪಕ, ನೃತ್ಯ ವೈವಿಧ್ಯ, ಹರಿಕಥೆ ಸಹಿತ ಕಲೆ ಮತ್ತು ಸಂಸ್ಕೃತಿಯ ಕಾರ್ಯಕ್ರಮಗಳಿಗೆ ಉತ್ತಮ ಸ್ಪಂದನೆ ದೊರೆತಿದೆ.
ತುಳುನಾಡಿನ ಧಾರ್ಮಿಕ ಸಂಸ್ಕೃತಿಯನ್ನು ಉಳಿಸುವಲ್ಲಿ ನಡೆಸಿ ರುವ ಸಾಮೂಹಿಕ ಕುಣಿತ ಭಜನೆ, ನಿತ್ಯ ಭಜನಾ ಕಾರ್ಯಕ್ರಮ, ಶರನ್ನ ವರಾತ್ರಿಯ ಪರಂಪರೆಯನ್ನು ಮೆರೆ ಯುವ ದಾಂಡಿಯಾ ಮತ್ತು ಗರ್ಬಾ ನೃತ್ಯಗಳಲ್ಲೂ ಜನರು ಪಾಲ್ಗೊಂಡಿದ್ದಾರೆ.
ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಸಮಾಜದ ವಿವಿಧ ಸಂಘ-ಸಂಸ್ಥೆಗಳು, ಯುವ ಸಂಘಟನೆ, ಮಹಾಸಭಾ ಮತ್ತು ಮಹಿಳಾ ಸಭಾದ ಸದಸ್ಯರೂ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿರುವುದು ವಿಶೇಷ.