ತಮ್ಮದೇ ಗನ್ನಿಂದ ನಟ ಗೋವಿಂದ ಕಾಲಿಗೆ ಗುಂಡೇಟು; ಆಸ್ಪತ್ರೆಗೆ ದಾಖಲು: ಆಗಿದ್ದೇನು?
ಮುಂಬೈ: ನಟ ಗೋವಿಂದ ಅವರು ತಮ್ಮದೇ ಗನ್ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸದ್ಯ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದು ಆಕಸ್ಮಿಕವಾಗಿ ನಡೆದಿರೋ ಘಟನೆ. ಗನ್ನಿಂದ ಫೈಯರ್ ಆದ ಬುಲೆಟ್ , ಅವರ ಕಾಲಿಗೆ ತಾಗಿದೆ. ಮುಂಜನೆ 5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು ರೆಡಿ ಆಗುತ್ತಿದ್ದರು. ಅವರು ತಮ್ಮ ಪರವಾನಗಿ ಗನ್ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.
ಗೋವಿಂದ ಅವರು ಬಾಲಿವುಡ್ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, ಈಗ ಮೊದಲಿನ ಬೇಡಿಕೆ ಉಳಿದಿಲ್ಲ. ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಬ್ರ್ಯಾಂಡ್ಗಳನ್ನು ಪ್ರಚಾರ ಮಾಡಿಕೊಂಡು ಸಮಯ ಕಳೆಯುತ್ತಿದ್ದಾರೆ.
‘ಕೂಲಿ ನಂಬರ್ 1’, ‘ಹಸೀನಾ ಮಾನ್ ಜಾಯೇಗಿ’, ‘ಸ್ವರ್ಗ್’, ‘ಸಾಜನ್ ಚಲೇ ಸಸುರಾಲ್’, ‘ರಾಜಾ ಬಾಬು’ ‘ರಾಜಾಜಿ’, ‘ಪಾರ್ಟ್ನರ್’ ಸಿನಿಮಾಗಳ ಮೂಲಕ ನಟಿಸಿ ಗಮನ ಸೆಳೆದಿದ್ದಾರೆ. ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ರಂಗೀಲ ರಾಜ’ ಸಿನಿಮಾದಲ್ಲಿ. ಈ ಚಿತ್ರ 2019ರಲ್ಲಿ ರಿಲೀಸ್ ಆಯಿತು.