ಹರಿಯಾಣ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಗೆಲುವು
Tuesday, October 8, 2024
ಹರಿಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ (Vinesh Phogat) ಅವರು ಭರ್ಜರಿ ಜಯ ಸಾಧಿಸಿದ್ದಾರೆ.
ವಿನೇಶ್ ಫೋಗಟ್ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರಿಗಿಂತ 4000 ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಧಿಕೃತ ಘೋಷಣೆ ಬಾಕಿ ಇದ್ದು. ಮತ ಅಂತರ ಇನ್ನಷ್ಟೇ ತಿಳಿಯಬೇಕಿದೆ.
ಅಚ್ಚರಿಯ ಸಂಗತಿ ಎಂದರೆ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ನಂತರ ಕಾಂಗ್ರೆಸ್‌ಗೆ ಸೇರಿ ಹರಿಯಾಣದ ಜೂಲಾನಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಇಂದು ನಡೆಯುತ್ತಿರುವ ಮತ ಎಣಿಕೆ ಪ್ರಕ್ರಿಯೆಯಲ್ಲಿ ಆರಂಭದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
2005ರ ನಂತರ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತೆ ಗೆದ್ದಿರುವ ಇತಿಹಾಸ ಇಲ್ಲ. ಆದರೆ ಈ ಬಾರಿ ಫೋಗಟ್ ಬಿಜೆಪಿಯನ್ನು ಸೋಲಿಸಿ ಮತ್ತೆ ಈ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಂಡು ಹೋಗಿದ್ದಾರೆ.