ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಸಿನೆಮಾ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ; ಸ್ಥಳಕ್ಕೆ ಭೇಟಿ ನೀಡಿ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಸಿನೆಮಾ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ; ಸ್ಥಳಕ್ಕೆ ಭೇಟಿ ನೀಡಿ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಚಾರ ಗಂಭೀರ ಚಿಂತೆ ಮೂಡಿಸಿದ್ದು, ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದವರು ತಿಳಿಸಿದ್ದಾರೆ.

ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article