
ಉಡುಪಿ ಉಚ್ಚಿಲ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಜಿ. ಶಂಕರ್
ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ಅಧೀನದಲ್ಲಿರುವ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ 10 ದಿನಗಳ ಕಾಲ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ.ಜಿ. ಶಂಕರ್ ಉದ್ಘಾಟಿಸಿದರು.
ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರದಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ನಾಲ್ಕು ಪಟ್ಟ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ, ಪ್ರಮುಖರಾದ ಸರ್ವೋತ್ತಮ ಕುಂದರ್, ದಿನೇಶ್ ಎರ್ಮಾಳು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಚಾಲಕ ಸತೀಶ್ ಅಮೀನ್ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು