ಮುಮ್ತಾಜ್ ಅಲಿ ನಿಗೂಢ ಸಾವಿನ ಪ್ರಕರಣ; ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರಿಂದ ಸ್ಪೋಟಕ ಮಾಹಿತಿ...

ಮುಮ್ತಾಜ್ ಅಲಿ ನಿಗೂಢ ಸಾವಿನ ಪ್ರಕರಣ; ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರಿಂದ ಸ್ಪೋಟಕ ಮಾಹಿತಿ...

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ, ಸಾಮಜಿಕ-ಧಾರ್ಮಿಕ ಧುರೀಣ, ಉದ್ಯಮಿ, ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿದ್ದಾರೆ.

‘ವಿಡಿಯೋ ಒಂದನ್ನು ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಎಂದು ದೂರು ಬಂದಿದೆ. ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್​ಒಸಿ ಜಾರಿ ಮಾಡಿದ್ದೇವೆ. ನಿನ್ನೆ(ಅ.06) ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಇಂದು ಬೆಳಗ್ಗೆ ಹತ್ತು ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮುಮ್ತಾಜ್ ಅಲಿ ಸಹೋದರ ಮೊಯಿದ್ದೀನ್ ಬಾವಾ ಅವರು ಹನಿಟ್ರ್ಯಾಪ್ ಮಾಡಿದ್ದಾರೆಂದು ಕಾವೂರು ಠಾಣೆಗೆ ದೂರು ನೀಡಿದ್ದಾರೆ ಎಂದರು.

ಕಾವೂರು ಠಾಣೆಯಲ್ಲಿ 6 ಜನರ ಮೇಲೆ ಎಫ್​ಐಆರ್ ಈ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ 6 ಜನರ ಮೇಲೆ ಎಫ್​ಐಆರ್ ದಾಖಲಾಗಿದ್ದು, ದೂರಿನಲ್ಲಿ 3 ತಿಂಗಳಿನಿಂದ ಖಿನ್ನತೆಯಲ್ಲಿ ಇದ್ದ ಬಗ್ಗೆ ಹಾಗೂ ವಿಡಿಯೋ ಆಧಾರದಲ್ಲಿ ಹಣಕ್ಕಾಗಿ ಬೆದರಿಕೆ ಹಾಕಿರುವ ಕುರಿತು ಉಲ್ಲೇಖಿಸಲಾಗಿದೆ. ಈ ಬಗ್ಗೆ ತಂಡ ರಚಿಸಿ ಆರೋಪಿಗಳಿಗೆ ಹುಡುಕಾಟ ಮಾಡುತ್ತಿದ್ದೇವೆ. ವಾಯ್ಸ್ ನೋಟ್​​ನಲ್ಲಿ ಸತ್ತಾರ್ ಎಂಬಾತನ ಬಗ್ಗೆ ಮುಮ್ತಾಜ್ ಹೇಳಿದ್ದಾರೆ. ಆರೋಪಿ ರೆಹಮತ್​ಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಆತ್ಮಹತ್ಯೆಗೂ ಮುನ್ನ ಬಸ್​ಗೆ ಮುಮ್ತಾಜ್​ ಅಲಿ ಕಾರು ಡಿಕ್ಕಿಯಾಗಿದೆ. ಬಸ್​ನವರ ಹೇಳಿಕೆಯನ್ನೂ ಪಡೆದಿದ್ದೇವೆ ಎಂದು ಹೇಳಿದರು.

ಘಟನೆ ಹಿನ್ನೆಲೆ: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ ಆಗಿರುವ ಮೃತ ಮುಮ್ತಾಜ್ ಅಲಿ ಅವರು, ರವಿವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಫ್,ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ. ಸಹೋದರನನ್ನ ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು‌ ಹಾಕಿದ್ದಾರೆ.

Ads on article

Advertise in articles 1

advertising articles 2

Advertise under the article