ಅ.24ರಿಂದ 26ರ ವರೆಗೆ ಉಡುಪಿ ಶ್ರೀಕೃಷ್ಣಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಅ.24ರಿಂದ 26ರ ವರೆಗೆ ಉಡುಪಿ ಶ್ರೀಕೃಷ್ಣಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು  ಇದೇ ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು. 

ಉಡುಪಿ ಕೃಷ್ಣಮಠದ ಗೀತಾಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಷ್ಟಮಠಗಳ ಆವರಣ, ಸಂಸ್ಕೃತ ಕಾಲೇಜು ಮುಂತಾದ ಸ್ಥಳಗಳಲ್ಲಿ  ಏಕಕಾಲದಲ್ಲಿ ಶಿಕ್ಷಣ, ಬಾಲಸಾಹಿತ್ಯ, ಕನ್ನಡ, ಸಂಸ್ಕೃತ, ಪಾಲಿ, ಉರ್ದು, ಯೋಗ, ಆಯುರ್ವೇದ ಮುಂತಾದ ಒಟ್ಟು 23 ವಿಷಯಗಳಲ್ಲಿ ಪ್ರತ್ಯೇಕ ವಿಚಾರಸಂಕಿರಣಗಳು ಪರ್ಯಾಯವಾಗಿ ನಡೆಯಲಿವೆ. ಭಾರತದ ಹಲವು ಭಾಗಗಳಿಂದ ಬೇರೆ ಬೇರೆ ವಿಷಯಗಳಿಗೆ ಸಂಬಂಧಿಸಿದ 2 ಸಾವಿರಕ್ಕೂ ಹೆಚ್ಚು ಶ್ರೇಷ್ಠ ವಿದ್ವಾಂಸರು ಆಗಮಿಸಿ, ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಮಂತ್ರಾಲಯದ ಸುಬುಧೇಂದ್ರತೀರ್ಥ ಶ್ರೀಪಾದರು, ಪತಂಜಲಿಯ ಬಾಬಾ ರಾಮದೇವ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಬಾಬಾ ರಾಮದೇವ ಜಿ ಹಾಗೂ ಆಚಾರ್ಯ ಬಾಲಕೃಷ್ಣ ಜಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ಮುಂಜಾನೆ 6ರಿಂದ 7ರ ವರೆಗೆ ಯೋಗ-ಧ್ಯಾನಾದಿ ತರಗತಿಗಳು ನಡೆಯುತ್ತವೆ. ಕರ್ನಾಟಕದ ಪ್ರಸಿದ್ಧ ಅಭಿನವ ನೃತ್ಯ ಅಕಾಡೆಮಿಯಿಂದ ’ತದ್ಭಾರತಂ’ ನೃತ್ಯ ಹಾಗೂ ಉಡುಪಿ ಕಲಾವಿದರಿಂದ 'ಯಕ್ಷನೃತ್ಯ' ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಮಾಹಿತಿ ನೀಡಿದರು.

Ads on article

Advertise in articles 1

advertising articles 2

Advertise under the article