ಮದರಸಾಗಳಿಂದ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು; ಎನ್‌ಸಿಪಿಸಿಆರ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಮದರಸಾಗಳಿಂದ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು; ಎನ್‌ಸಿಪಿಸಿಆರ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಮದರಸಾಗಳಿಂದ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಆದೇಶ ಮತ್ತು ಈ ಸಂಬಂಧ ಕೆಲವು ರಾಜ್ಯಗಳು ಕೈಗೊಂಡಿರುವ ಕ್ರಮಗಳನ್ನು ತಡೆಹಿಡಿಯುವ ಅಗತ್ಯವಿದೆ ಎಂದು ಮುಸ್ಲಿಂ ಸಂಘಟನೆ ಜಮಿಯತ್ ಉಲೇಮಾ ಇ-ಹಿಂದ್ ಪರ ಮಂಡಿಸಿದ ವಾದವನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಪರಿಗಣಿಸಿದೆ.

ಮಾನ್ಯತೆ ಇಲ್ಲದ ಮದರಸಾಗಳಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸ್ಥಳಾಂತರಿಸುವ ಕುರಿತಂತೆ ಉತ್ತರ ಪ್ರದೇಶ ಮತ್ತು ತ್ರಿಪುರಾ ರಾಜ್ಯಗಳ ಕ್ರಮಗಳನ್ನೂ ಸಂಸ್ಥೆ ಪ್ರಶ್ನಿಸಿತ್ತು.

ವಾದ ಆಲಿಸಿದ ನ್ಯಾಯಾಲಯ ಎನ್‌ಸಿಪಿಸಿಆರ್ ಜೂನ್ 7 ಮತ್ತು ಜೂನ್ 25ರಂದು ಹೊರಡಿಸಿರುವ ಅದೇಶದನ್ವಯ ಕ್ರಮ ಜರುಗಿಸದಂತೆ ಆದೇಶಿಸಿದೆ.

4 ಎನ್‌ಸಿಪಿಸಿಆ‌ರ್ ಆದೇಶದನ್ವಯ ರಾಜ್ಯಗಳು ಹೊರಡಿಸಿರುವ ನಿರ್ದೇಶನಗಳಿಗೆ ಸಹ ಕೋರ್ಟ್ ತಡೆ ಹಾಕಿದೆ.

ಅಲ್ಲದೆ, ಉತ್ತರ ಪ್ರದೇಶ, ತ್ರಿಪುರಾ ಸೇರಿದಂತೆ ಇತರ ರಾಜ್ಯಗಳನ್ನು ಪ್ರಕರಣದ ಪಾರ್ಟಿಗಳಾಗಿ ಮಾಡುವಂತೆಯೂ ಸೂಚಿಸಿದೆ.

Ads on article

Advertise in articles 1

advertising articles 2

Advertise under the article