
ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ವಿಧಿವಶ
Thursday, October 10, 2024
ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರತನ್‌ಟಾಟಾ ಅವರನ್ನು ಸೋಮವಾರ ಮಹಾರಾಷ್ಟ್ರದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾರಂಭದಲ್ಲಿ ಅವರು ಸಾಮಾನ್ಯ ಆರೋಗ್ಯ ಪರೀಕ್ಷೆ ಒಳಪಟ್ಟಿದ್ದಾರೆ ಎಂದೇ ಹೇಳಲಾಗಿತ್ತು. ಅಲ್ಲದೇ ಅವರು ಸಹ ನಾನು ಆರೋಗ್ಯವಾಗಿಯೇ ಇದ್ದೇನೆ. ಚಿಂತಿಸಬೇಡಿ ಎಂದೇ ಹೇಳಿದ್ದರು. ಆದರೆ, ಅವರ ಆರೋಗ್ಯದ ಬಗ್ಗೆ ಅನುಮಾನಗಳು ಮೂಡಿದ್ದವು. ಅದರಂತೆ ಬುಧವಾರ ಸಂಜೆಯ ವೇಳೆಗೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎನ್ನುವ ವರದಿಗಳು ಬರಲು ಪ್ರಾರಂಭಿಸಿತ್ತು. ಬುಧವಾರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅವರಿಗೆ 86 ವರ್ಷವಾಗಿತ್ತು. ಅವರು ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದರು.