ತನ್ನ ನಾಯಿಗೋಸ್ಕರ ಬ್ರಿಟನ್​ನ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದ ರತನ್ ಟಾಟಾ!

ತನ್ನ ನಾಯಿಗೋಸ್ಕರ ಬ್ರಿಟನ್​ನ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದ ರತನ್ ಟಾಟಾ!

ಮುಂಬೈ: ದೇಶದ ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಉದ್ಯಮದ ಜತೆಗೆ ಪ್ರಾಣಿ ಪ್ರಿಯರು ಹೌದು. ಬ್ರಿಟನ್​ನ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಅಂದು ತಮ್ಮ ಸಾಕು ನಾಯಿಗೋಸ್ಕರ ತಿರಸ್ಕರಿಸಿದ್ದರು. ಆ ಕುರಿತ ಕುತೂಹಲಕಾರಿ ಮಾಹಿತಿ ಇಲ್ಲಿದೆ.

2018ರ ಫೆಬ್ರವರಿ 6ರಂದು ಬ್ರಿಟನ್​ನ ರಾಜಮನೆತನ ಬಕಿಂಗ್​ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಸಮಾರಂಭದಲ್ಲಿ ಬ್ರಿಟನ್ ರಾಯಲ್ ಪ್ರಿನ್ಸ್​​ ಚಾರ್ಲ್ಸ್​ ಅವರು ಭಾರತೀಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಲೋಕೋಪಕಾರಿ ಕೆಲಸಕ್ಕೆ ಜೀವಮಾನದ ಸಾಧನೆ ಪ್ರಶಸ್ತಿ ನೀಡಲು ಬಯಸಿದ್ದರು.

ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ ಅದಕ್ಕೆ ಕಾರಣ ಅವರ ಸಾಕು ನಾಯಿ ಎಂದು ಹೇಳಿದರೆ ನಿಮಗೆಲ್ಲಾ ಆಶ್ಚರ್ಯವಾಗಬಹುದು. ಅಂಕಣಕಾರ ಸುಹೇಲ್ ಸೇಠ ಈ ಘಟನೆಯನ್ನು ಕೆಲವು ಸಮಯಗಳ ಹಿಂದೆ ಯೂಟ್ಯೂಬ್ ವಿಡಿಯೋದಲ್ಲಿ ನೆನಪಿಸಿಕೊಂಡಿದ್ದರು , ಇಷ್ಟು ದೊಡ್ಡ ಕಾರ್ಯಕ್ರಮಕ್ಕೆ ರತನ್ ಟಾಟಾ ಏಕೆ ಹೋಗಿರಲಿಲ್ಲ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದರು.

ಬ್ರಿಟಿಷ್ ಏಷ್ಯನ್ ಟ್ರಸ್ಟ್ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೆ ಹಾಜರಾಗಲು ತಾನು ಫೆಬ್ರವರಿ 2 ಅಥವಾ ಫೆಬ್ರವರಿ 3 ರಂದು ಲಂಡನ್ ತಲುಪಿದ್ದೆ ಎಂದು ಸುಹೇಲ್ ಹೇಳಿದರು.

ಸುದೀರ್ಘ ವಿಮಾನ ಪ್ರಯಾಣದ ನಂತರ ಲಂಡನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ತಮ್ಮ ಫೋನ್‌ನಲ್ಲಿ ರತನ್​ ಟಾಟಾ ಅವರ 11 ಮಿಸ್ಡ್​ ಕಾಲ್ ಇದ್ದಿದ್ದು ನೋಡಿ ಆಶ್ಚರ್ಯವಾಯಿತು. ಅವರ ಒಂದು ಸಾಕು ನಾಯಿಗೆ ತೀವ್ರ ಅನಾರೋಗ್ಯ ಕಾಡಿತ್ತು, ಅದಕ್ಕೆ ಕಾಯಿಲೆ ಇದೆ ಅದನ್ನು ಬಿಟ್ಟುಬರಲು ಸಾಧ್ಯವಿಲ್ಲ ಎಂದು ರತನ್ ಹೇಳಿದ್ದರು.

ಅವರ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ, ಆ ಕಾರ್ಯಕ್ರಮಕ್ಕೆ ಪ್ರಶಸ್ತಿ ಸ್ವೀಕರಿಸಲು ಅವರು ಬಂದಿರಲಿಲ್ಲ.

ಕಾರ್ಯಕ್ರಮಕ್ಕೆ ರತನ್ ಟಾಟಾ ಬಾರದಿರುವುದರ ಹಿಂದಿನ ಕಾರಣ ಕೇಳಿ ಪ್ರಿನ್ಸ್ ಚಾರ್ಲ್ಸ್ ಹೇಳಿದ್ದನ್ನ ಸುಹೇಲ್ ಸೇಠ್ ನೆನಪಿಸಿಕೊಂಡಿದ್ದಾರೆ, ರಾಜಕುಮಾರ ಚಾರ್ಲ್ಸ್ ಅವರು, ಮನುಷ್ಯನೆಂದರೆ ಹೀಗಿರಬೇಕು, ರತನ್ ಟಾಟಾ ಅದ್ಭುತ ವ್ಯಕ್ತಿ ಎಂದು ಹೇಳಿದ್ದರು.

Ads on article

Advertise in articles 1

advertising articles 2

Advertise under the article