
ಜಗಮಗಿಸುತ್ತಿರುವ ಉಡುಪಿ– ಉಚ್ಚಿಲ ದಸರಾದ ವಿದ್ಯುತ್ ದೀಪಾಲಂಕಾರವನ್ನು ಉದ್ಘಾಟಿಸಿದ ಪ್ರಕಾಶ್ ಶೆಟ್ಟಿ
ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಡಳಿತದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಳದಲ್ಲಿ ನಡೆಯುತ್ತಿರುವ "ಉಡುಪಿ ಉಚ್ಚಿಲ ದಸರಾ-2024"ರಲ್ಲಿ ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಬಂಜಾರ ಅವರ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ವಿದ್ಯುತ್ ದೀಪಾಲಂಕಾರವನ್ನು ಡಾ. ಕೆ. ಪ್ರಕಾಶ್ ಶೆಟ್ಟಿ ಗುರುವಾರ ಸಂಜೆ ಉದ್ಘಾಟಿಸಿದರು.
ಪಡುಬಿದ್ರೆಯಿಂದ ಕಾಪುವರಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವರ್ಣರಂಜಿತ ವಿದ್ಯುತ್ ದೀಪಾಲಾಂಕಾರ ಮಾಡಲಾಗಿದ್ದು, ಉಚ್ಚಿಲ ಪೇಟೆಯಂತೂ ಜಗಮಗಿಸುತ್ತಿದೆ. ದೇವಸ್ಥಾನದ ಸುತ್ತಮುತ್ತ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದು, ಇದು ದಿನದಿಂದ ದಿನಕ್ಕೆ ದುಪ್ಪಟ್ಟವಾಗಲಿದೆ.
ವಿದ್ಯುತ್ ದೀಪಾಲಂಕಾರ ಉದ್ಘಾಟನೆಯ ಸಂದರ್ಭ ಉಡುಪಿ – ಉಚ್ಚಿಲ ದಸರಾದ ರೂವಾರಿ, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್, ಡಾ. ಕೆ. ಪ್ರಕಾಶ್ ಶೆಟ್ಟಿ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಹಾರಾಷ್ಟ್ರ ಸರಕಾರದ ವಿಧಾನ ಪರಿಷತ್ ಸದಸ್ಯ ಮಿಲಿಂದ್ ನಾರ್ವೇಕರ್ ದಂಪತಿ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಮಟ್ಟು, ಪ್ರಮುಖರಾದ ವಾಸುದೇವ ಸಾಲ್ಯಾನ್, ಗುಂಡು ಬಿ. ಅಮೀನ್, ಶ್ರೀಪತಿ ಭಟ್ ಉಚ್ಚಿಲ, ಮೋಹನ್ ಬೇಂಗ್ರೆ, ಮೊದಲಾದವರು ಉಪಸ್ಥಿತರಿದ್ದರು.