ಉಳ್ಳಾಲ ನೇತ್ರಾವತಿ ಸೇತುವೆಗೆ ಢಿಕ್ಕಿ ಹೊಡೆದ ಬೈಕ್; ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಉಳ್ಳಾಲ ನೇತ್ರಾವತಿ ಸೇತುವೆಗೆ ಢಿಕ್ಕಿ ಹೊಡೆದ ಬೈಕ್; ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಮಂಗಳೂರು:  ಅಪಘಾತವೊಂದರಲ್ಲಿ ಬೈಕ್ ಸವಾರ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ಸೇತುವೆಗೆ ಅಳವಡಿಸಿದ್ದ ಕಬ್ಬಿಣದ ತಗಡು ಶೀಟ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ ಪದವು ನಿವಾಸಿ ಸಲ್ಮಾನ್ ಫಾರಿಶ್ (19) ಎಂದು ಗುರುತಿಸಲಾಗಿದೆ. ಸವಾರ ಮೊಹಮ್ಮದ್ ಶಾಕಿರ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲತಃ ಬಿ.ಸಿ.ರೋಡ್ ನಿವಾಸಿಗಳಾದ ಅವರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಅವರು ಇಂದು ಸಂಜೆ ಕೊಣಾಜೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ನೇತ್ರಾವತಿ ಸೇತುವೆ ಬಳಿ ವಾಹನ ಕಬ್ಬಿಣದ ತಗಡು ಶೀಟ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಇದರಿಂದ ವಾಹನದಲ್ಲಿದ್ದ ಇಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ‌ಸಲ್ಮಾನ್ ಪಾರಿಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article