ವಕ್ಫ್ ಬೋರ್ಡ್ ಹೆಸರಿನಲ್ಲಿ ಭೂಕಬಳಿಕೆ ಆರೋಪ; ನ.6ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ
ಉಡುಪಿ: ರೈತರ ಭೂಮಿಯನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದಾಗಿ ಆರೋಪಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ನ.6ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಕಾಯಿನ್ ಸರ್ಕಲ್‌ನಿಂದ ಮೆರವಣಿಗೆ ಸಾಗಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಡಿಸಿ ಮೂಲಕ ಮನವಿ ಸಲ್ಲಿಸಲಾಗುವುದು. ಇದರಲ್ಲಿ ಮಠ ಮಂದಿರದ ಮುಖ್ಯಸ್ಥರು, ರೈತರು ಸಾವಿರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ನ.4ರಂದು ಮಧ್ಯಾಹ್ನ 12ಗಂಟೆಗೆ ಕಾರ್ಕಳ, ಸಂಜೆ 4ಗಂಟೆಗೆ ಹೆಬ್ರಿ, ನ.5ರಂದು ಮಧ್ಯಾಹ್ನ 3ಗಂಟೆಗೆ ಕುಂದಾಪುರ, ನ.6ರಂದು ಮಧ್ಯಾಹ್ನ 3ಗಂಟೆಗೆ ಕಾಪು ಮತ್ತು ಬೈಂದೂರು ತಾಲೂಕು ಕಚೇರಿಗಳಿಗೆ ತೆರಳಿ ಸಾಮೂಹಿಕವಾಗಿ ಪಹಣಿ ಪರಿಶೀಲನೆ ಕಾರ್ಯ ನಡೆಸಲಾಗುವುದು. ನ.7 ಮತ್ತು 8ರಂದು ಜಿಲ್ಲೆಯ ಎಲ್ಲ ಐದು ಕ್ಷೇತ್ರಗಳಲ್ಲಿಯೂ ಪ್ರತಿಭಟನೆ ನಡೆಸಲಾ ಗುವುದು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.