ಮಂಗಳೂರು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಫ್ಯಾಕ್ಟರಿಯೊಂದರಲ್ಲಿ ಬಾಲಕಿ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿಗೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. 2021ರ ನವೆಂಬರ್ 21ರಂದು ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿತ್ತು.
ಹೊರ ರಾಜ್ಯದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ನವೆಂಬರ್ 21 ರಂದು ಟೈಲ್ಸ್ ಫ್ಯಾಕ್ಟರಿಯಲ್ಲಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ಫ್ಯಾಕ್ಟರಿ ಒಳಗಡೆ ಇದ್ದ ಚರಂಡಿಯಲ್ಲಿ ಬಾಲಕಿ ಮೃತದೇಹ ಎಸೆದಿದ್ದರು. ಮೂವರು ಆರೋಪಿಗಳೂ ಟೈಲ್ಸ್ ಫ್ಯಾಕ್ಟರಿ ಸಿಬ್ಬಂದಿಯಾಗಿದ್ದರು. ಆರೋಪಿಗಳ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ ದಾಖಲಾಗಿತ್ತು.
ಇಬ್ಬರು ಆರೋಪಿಗಳು ಈ ಹಿಂದೆಯೂ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಾಲಕಿ ತಂದೆ ಮತ್ತು ತಾಯಿ ಕುಡಿತದ ಚಟಕ್ಕೆ ಬಿದ್ದಿದ್ದು, ಇದನ್ನೇ ಬಳಸಿ ದೌರ್ಜನ್ಯ ಎಸಗಿದ್ದರು. ಪ್ರಕರಣ ಸಂಬAಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.