ಆತ್ರಾಡಿ ಗ್ರಾಮ ಪಂಚಾಯತ್ ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Tuesday, November 26, 2024
ಮಣಿಪಾಲ: ಅತ್ರಾಡಿ ಗ್ರಾಮ ಪಂಚಾಯತ್ ನ ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ರೂ. 8 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಇಂದು ದಿನಾಂಕ 26-11-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ವಿವಿಧ ಸವಲತ್ತುಗಳನ್ನು ವಿತರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಶಾರಾದಾ ಶೆಟ್ಟಿಗಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಜೋಗಿ, ಗ್ರಾಮ ಆಡಳಿತಾಧಿಕಾರಿಗಳಾದ ಸುಮಿತ್ರಾ ಹಾಗೂ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು.