ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್

ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್

ನವದೆಹಲಿ: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಜನ್ ಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಶುಕ್ರವಾರ ಹೇಳಿದ್ದಾರೆ. 

ಪ್ರಜಾಪ್ರಭುತ್ವದಲ್ಲಿ ಕಾನೂನನ್ನು ಜಾರಿಗೆ ತರುವ ಮೊದಲು ಅದರಿಂದ ಪ್ರಭಾವಿತರಾಗುವ ಜನರ ವಿಶ್ವಾಸವನ್ನು ಸರ್ಕಾರ ಪಡೆದುಕೊಳ್ಳಬೇಕು ಎಂದರು.

"ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕೇ ಅಥವಾ ಬೇಡವೇ ಎಂಬುದು ದೊಡ್ಡ ಚರ್ಚೆಯಾಗಿ ಉಳಿದಿದೆ. ದೇಶದ ಜನಸಂಖ್ಯೆಯ ಶೇ. 20 ರಷ್ಟಿರುವ ಮುಸ್ಲಿಂ ಜನಸಂಖ್ಯೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಹೊರತು ಈ ರೀತಿಯ ಮೂಲಭೂತ ಕಾನೂನನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಕಿಶೋರ್ ANI ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸಿಎಎ-ಎನ್‌ಆರ್‌ಸಿ ವಿಷಯದಲ್ಲಿ ದೇಶದಾದ್ಯಂತ ಪ್ರತಿಭಟನೆಗಳನ್ನು ನೋಡಿದ್ದೇವೆ. ಕಾನೂನಿಂದ ತೊಂದರೆಗೊಳಗಾಗುವ ಜನರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳದ ಹೊರತು ಅದನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಕಾನೂನುಗಳನ್ನು ತರುವ ಮೊದಲು ಪಾಲುದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಏನಾಗುತ್ತದೆ ಎಂಬುದಕ್ಕೆ ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ್ದನ್ನು ಅವರು ಉದಾಹರಣೆಯಾಗಿ ಉಲ್ಲೇಖಿಸಿದರು.

ಕೇಂದ್ರ ಸರ್ಕಾರ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾನೂನುಗಳನ್ನು ಜಾರಿಗೆ ತಂದಿತ್ತು. ಆದರೆ ಅದರಿಂದ ಆದ ಫಲಿತಾಂಶವೇನು? ಸರ್ಕಾರ ಕಾನೂನನ್ನು ರದ್ದುಗೊಳಿಸಬೇಕಾಗಿತ್ತು. ಏಕರೂಪ ನಾಗರಿಕ ಸಂಹಿತೆ ಅಥವಾ ಇನ್ನೊಂದು ಕಾನೂನನ್ನು ನೀವು ಆ ಕಾನೂನಿನಿಂದ ಪ್ರಭಾವಿತರಾಗುವ ಜನರನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ ಅದನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಏಕರೂಪ ನಾಗರಿಕ ಸಂಹಿತೆ ಪರವಾಗಿ ಮಾತನಾಡಿದ್ದರು. ಈಗ ಧರ್ಮ ಆಧಾರಿತ ತಾರತಮ್ಯದಿಂದ ದೇಶವನ್ನು ಮುಕ್ತಗೊಳಿಸಲು ಜಾತ್ಯತೀತ ನಾಗರಿಕ ಸಂಹಿತೆಯತ್ತ ಸಾಗಬೇಕಾಗಿದೆ ಎಂದು ಹೇಳಿದ್ದರು.

Ads on article

Advertise in articles 1

advertising articles 2

Advertise under the article