ಪಡಿತರ ಚೀಟಿ ಗೊಂದಲ: BPL​, APL​ ಕಾರ್ಡ್​ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ: ಸಚಿವ ಕೆ.ಎಚ್ ಮುನಿಯಪ್ಪ

ಪಡಿತರ ಚೀಟಿ ಗೊಂದಲ: BPL​, APL​ ಕಾರ್ಡ್​ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ: ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡುವ ಬಗ್ಗೆ ಸೃಷ್ಟಿಯಾದ ಗೊಂದಲದ ಹಿನ್ನೆಲೆಯಲ್ಲಿ ಪರಿಷ್ಕರಣೆ ಕಾರ್ಯ ಕೈಬಿಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ 1,02,509 ಕಾರ್ಡ್​ಗಳನ್ನು​ ಪರಿಷ್ಕರಣೆ ಮಾಡಿದ್ದೇವೆ. ಉಳಿದ ಎಲ್ಲ ಬಿಪಿಎಲ್ (BPL), ಎಪಿಎಲ್ (APL) ಕಾರ್ಡ್​ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್​ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್​ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್​ಗಳನ್ನು ಎಪಿಎಲ್​ಗೆ ಸೇರಿಸಲಾಗಿದೆ. ಬಿಪಿಎಲ್​ಗೆ ಅರ್ಹರಿದ್ದೂ ಕೂಡ ಎಪಿಎಲ್​ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ ಎಂದರು.

ಬಿಪಿಎಲ್​ಗೆ ಅರ್ಹರಿದ್ದವರ ಕಾರ್ಡ್ ರದ್ದಾಗಿದ್ದರೆ ಒಂದು ವಾರ ಕಾಲಾವಕಾಶ ನೀಡಿ, ಮರು ನೋಂದಣಿ ಮಾಡಿಕೊಂಡು ಕಾರ್ಡ್​ ಮರುಹಂಚಿಕೆ ಮಾಡುತ್ತೇವೆ ಎಂದು ತಿಳಿಸಿದರು.

ಬಿಪಿಎಲ್ ಕಾರ್ಡ್​ದಾರರನ್ನು ಎಪಿಎಲ್​ಗೆ ಸೇರ್ಪಡೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ, ಎಲ್ಲ ಗೊಂದಲದ ಹೊಣೆ ನಾನೇ ಹೊರುವೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡುವೆ. ಯಾವುದೇ ಅರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ ಎಂದು ಭರವಸೆ ನೀಡಿದರು.

ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್​ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್​ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್​ಗಳನ್ನು ಎಪಿಎಲ್ ಗೆ ಸೇರಿಸಲಾಗಿದೆ. ಬಿಪಿಎಲ್​ಗೆ ಅರ್ಹರಿದ್ದೂ ಕೂಡ ಎಪಿಎಲ್​ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ.

Ads on article

Advertise in articles 1

advertising articles 2

Advertise under the article