'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದೆಂದು ಹೇಳಿದ್ದ ಚಂದ್ರಶೇಖರನಾಥ ಸ್ವಾಮೀಜಿ; ಡಿಸೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್

'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದೆಂದು ಹೇಳಿದ್ದ ಚಂದ್ರಶೇಖರನಾಥ ಸ್ವಾಮೀಜಿ; ಡಿಸೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್


ಬೆಂಗಳೂರು: 'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಡಿಸೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚಂದ್ರಶೇಖರನಾಥ ಸ್ವಾಮೀಜಿ ಅವರು ನಮ್ಮ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಮತದಾನದ ಹಕ್ಕಿಗೆ ಕೈ ಹಾಕಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಸೈಯ್ಯದ್ ಅಬ್ಬಾಸ್ ದೂರು ನೀಡಿದ್ದರು.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸ್ವಾಮೀಜಿ, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.

ಬಳಿಕ ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಅವರು ವಿಷಾದ ವ್ಯಕ್ತಪಡಿಸಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಮನವಿ ಮಾಡಿದ್ದರು.

Ads on article

Advertise in articles 1

advertising articles 2

Advertise under the article