ಡಾ.ತುಂಬೆ ಮೊಯ್ದಿನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

ಡಾ.ತುಂಬೆ ಮೊಯ್ದಿನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯುಎಇಯಲ್ಲಿ ಪ್ರತಿಷ್ಠಿತ ಉದ್ಯಮ, ಶಿಕ್ಷಣ ಸಮೂಹ ಕಟ್ಟಿ ಬೆಳೆಸುವ ಮೂಲಕ ಭಾರತದ ಕೀರ್ತಿ ಪತಾಕೆ ಹಾರಿಸಿ ಸಾಧನೆಗೈದಿರುವ ಡಾ.ತುಂಬೆ ಮೊಯ್ದಿನ್ ಅವರಿಗೆ ಈ ಬಾರಿ ಕರ್ನಾಟಕ ರಾಜ್ಯ ಸರಕಾರವು 'ಹೊರದೇಶ' ಕ್ಷೇತ್ರದ 2024ನೇ ಸಾಲಿನ ಪ್ರತಿಷ್ಠಿತ 'ರಾಜ್ಯೋತ್ಸವ' ಪ್ರಶಸ್ತಿ ಶುಕ್ರವಾರ ಪ್ರದಾನ ಮಾಡಿದೆ.






ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. 

ಡಾ.ತುಂಬೆ ಮೊಯ್ದಿನ್ ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪುರಸ್ಕೃತರಿಗೆ ಶಾಲಿನ ಜೊತೆ ಹೂವಿನ ಹಾರ ಹಾಕಿ, ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರಾದ 69 ಸಾಧಕರು ಮತ್ತು ಕರ್ನಾಟಕ ಸುವರ್ಣ ಸಂಭ್ರಮದ ಪ್ರಶಸ್ತಿಗೆ ಭಾಜನರಾದ 100 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ವಾರ್ಷಿಕ ಪ್ರಗತಿ ವರದಿ ಸಂಸ್ಕೃತಿ ಪಯಣ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. 

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವರಾದ ಪರಮೇಶ್ವರ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article