
ಉಪಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಿಜೆಪಿ; ಸಿಟ್ಟಿನಿಂದ ಟಿವಿಯನ್ನೇ ಒಡೆದು ಹಾಕಿದ ಬಿಜೆಪಿ ಕಾರ್ಯಕರ್ತ!
ವಿಜಯಪುರ: ರಾಜ್ಯದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ದಾಖಲಿಸುವ ಮೂಲಕ ವಿಪಕ್ಷ ಬಿಜೆಪಿ-ಜೆಡಿಎಸ್‌ಗೆ ಮುಖಭಂಗವನ್ನುಂಟು ಮಾಡಿದೆ
ವಿಶೇಷವಾಗಿ ಮಾಜಿ ಸಿಎಂ ಇಬ್ಬರ ಮಕ್ಕಳಾದ ಭರತ್ ಬೊಮ್ಮಾಯಿ ಮತ್ತು ನಿಖಿಲ್ ಕುಮಾರಸ್ವಾಮಿಗೆ ಈ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಉಪಚುನಾವಣೆ ನಡೆದ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ರಾಜ್ಯದ ಮತದಾರರು ಕಾಂಗ್ರೆಸ್‌ನ (Congress) ʼಕೈʼ ಹಿಡಿದಿದ್ದಾರೆ. ಈ ಹೀನಾಯ ಸೋಲು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.
ರಾಜ್ಯದ ಉಪಚುನಾವಣೆಯಲ್ಲಿ ಹೀನಾಯ ಸೋಲುಂಟಾದ ಪರಿಣಾಮ ಚುನಾವಣಾ ಫಲಿತಾಂಶ ಕಂಡು ಬಿಜೆಪಿ ಕಾರ್ಯಕರ್ತನೊಬ್ಬ ತನ್ನ ಮನೆಯ ಟಿವಿಯನ್ನೇ ಒಡೆದು ಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಇಂದಿನ ಉಪ ಚುನಾವಣೆಯಲ್ಲಿ ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲುಂಟಾದ ಹಿನ್ನೆಲೆಯಲ್ಲಿ ಮನೆಯಲ್ಲಿನ ಟಿವಿಯನ್ನೇ ಒಡೆದು ಹಾಕಿದ್ದು, ಈ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದ ನಿವಾಸಿ, ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಭಾಗಿ ಎಂಬಾತ ತನ್ನ ಮನೆಯ ಟಿವಿಯನ್ನು ಒಡೆದು ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ರಾಜ್ಯ ಬಿಜೆಪಿ ನಾಯಕರ ನಡುವಿನ ಭಿನ್ನಮತಕ್ಕೆ ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಭಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ನಾಯಕರ ನಡುವಿನ ಬಿರುಕು, ಕಾರ್ಯಕರ್ತರಲ್ಲಿ ಆಕ್ರೋಶ ಉಂಟು ಮಾಡಿದೆ ಎಂಬುದಕ್ಕೆ ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಭಾಗಿ ಸಾಕ್ಷಿಯಾಗಿದ್ದಾನೆ.
ಬಿಜೆಪಿ ನಾಯಕರಲ್ಲಿ ಒಗ್ಗಟಿನ ಕೊರತೆಯಿಂದ ಇಂದಿನ ಉಪಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ಕಾರಣ ಎಂದು ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಭಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಿರಿ. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಮನೆಯಲ್ಲಿದ್ದ ಟಿವಿಯನ್ನ ಹೊರ ತಂದು ಒಡೆದುಹಾಕಿದ್ದಾನೆ.
ಒಟ್ಟಿನಲ್ಲಿ ಪಕ್ಷದಲ್ಲಿ ನಾಯಕರ ನಡುವಿನ ಬಿರುಕು, ಕಾರ್ಯಕರ್ತರಲ್ಲಿ ಆಕ್ರೋಶ ಉಂಟು ಮಾಡಿದೆ ಎಂಬುದಕ್ಕೆ ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಭಾಗಿ ಸಾಕ್ಷಿಯಾಗಿದ್ದಾನೆ.