ಯುದ್ಧಪೀಡಿತ ಸಿರಿಯಾದಿಂದ 75 ಮಂದಿ ಭಾರತೀಯರ ಸ್ಥಳಾಂತರ!

ಯುದ್ಧಪೀಡಿತ ಸಿರಿಯಾದಿಂದ 75 ಮಂದಿ ಭಾರತೀಯರ ಸ್ಥಳಾಂತರ!

ಡಮಾಸ್ಕಸ್‌: ಯುದ್ಧಪೀಡಿತ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಅಲ್ಲದೇ ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಒತ್ತು ನೀಡುತ್ತದೆ ಎಂದು ಒತ್ತಿ ಹೇಳಿದೆ.

ಇಸ್ಲಾಮಿಕ್‌ ಬಂಡುಕೋರು ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಸರ್ಕಾರವನ್ನು ಪತನಗೊಳಿಸಿದ್ದು, ಸ್ವತಂತ್ರ ಸರ್ಕಾರ ರಚಿಸಲು ಮುಂದಾಗಿದ್ದಾರೆ. ಈ ಬೆಳವಣಿಗಳ ನಡುವೆ 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಲಾಗಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿದ್ದ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳೂ (ಯಾತ್ರಿಕರೂ) ಸೇರಿದ್ದಾರೆ. 

ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಲೆಬನಾನ್‌ಗೆ ದಾಟಿದ್ದು, ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಭಾರತಕ್ಕೆ ಹಿಂತಿರುಗುತ್ತಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 

ಭಾರತ ಸರ್ಕಾರವು ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಸಿರಿಯಾದಲ್ಲಿ ಉಳಿದಿರುವ ಭಾರತೀಯ ಪ್ರಜೆಗಳು ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಅವರ ತುರ್ತು ಸಹಾಯವಾಣಿ ಸಂಖ್ಯೆ +963 993385973 (ವಾಟ್ಸಾಪ್‌ನಲ್ಲಿಯೂ ಸಹ) ಮತ್ತು ಇಮೇಲ್ ಐಡಿ (hoc.damascus@mea.gov.in)ಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ. ಭಾರತ ಸರ್ಕಾರವು ಸಿರಿಯಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ. 

Ads on article

Advertise in articles 1

advertising articles 2

Advertise under the article