ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವ ವರೆಗೂ ಪಾದರಕ್ಷೆ ಧರಿಸಲ್ಲ: ಅಣ್ಣಾಮಲೈ ಪ್ರತಿಜ್ಞೆ
Thursday, December 26, 2024
ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವ ವರೆಗೂ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದಾರೆ.
ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಧಿಸಿ ಶುಕ್ರವಾರ ನಮ್ಮ ಮನೆಯ ಮುಂದೆಯೇ ಆರು ಬಾರಿ ಚಾಟಿಯೇಟು ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ. ಅದಕ್ಕಾಗಿಯೇ ಈಗ ಬಿಜೆಪಿ ಸದಸ್ಯರು ತಮ್ಮ ಮನೆಗಳ ಹೊರಗೆ ಪ್ರತಿಭಟನೆ ನಡೆಸುತ್ತಾರೆ ಎಂದು ಅವರು ಹೇಳಿದ್ದಾರೆ.