ಉಡುಪಿ: ಗಾಂಜಾ ಮತ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ; ಗಾಂಜಾ, ಎಂಡಿಎಂಎ ಸಹಿತ 7,86,330 ಲಕ್ಷ ಮೌಲ್ಯದ ಸೊತ್ತುಗಳ ವಶ

ಉಡುಪಿ: ಗಾಂಜಾ ಮತ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ; ಗಾಂಜಾ, ಎಂಡಿಎಂಎ ಸಹಿತ 7,86,330 ಲಕ್ಷ ಮೌಲ್ಯದ ಸೊತ್ತುಗಳ ವಶ

ಉಡುಪಿ: ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕುರ್ಕಾಲು ಗ್ರಾಮದ ನಿವಾಸಿ ಪ್ರೇಮನಾಥ (23), ಪೆರ್ಡೂರಿನ ನಿವಾಸಿ ಶೈಲೇಶ ಶೆಟ್ಟಿ (24), ಬೊಮ್ಮರಬೆಟ್ಟು ನಿವಾಸಿಗಳಾದ ಪ್ರಜ್ವಲ್‌ (28) ಮತ್ತು ರತನ್‌ (27) ಎಂದು ಗುರುತಿಸಲಾಗಿದೆ. ಉಡುಪಿ-ಕಾರ್ಕಳ ಹೆದ್ದಾರಿಯ ನೀರೆ ಎಂಬಲ್ಲಿನ ಸಾರ್ವಜನಿಕ ರಸ್ತೆಯಲ್ಲಿ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಎಂಡಿಎಂಎ ಪೌಡರ್‌ ಅನ್ನು ಮಾರಾಟ ಮಾಡಲು ಯತ್ನಿಸುತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಈ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 37 ಗ್ರಾಂ 27 ಮಿಲಿ ಗ್ರಾಂ ತೂಕದ ಎಂಡಿಎಂಎ, 1ಕೆ.ಜಿ 112 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದು, ಎಂಡಿಎಂಎ ಅಂದಾಜು ಮೌಲ್ಯ ರೂ. 2 ಲಕ್ಷ , ಗಾಂಜಾದ ಅಂದಾಜು ಮೌಲ್ಯ ರೂ. 87,500, ಆಗಿರುತ್ತದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಮೊಬೈಲ್‌ 5 ಪೋನ್‌, ಅಂದಾಜು ಮೌಲ್ಯ ರೂ. 41 ಸಾವಿರ , ಗಾಂಜಾವನ್ನು ಸಾಗಾಟ ಮಾಡಲು ಬಳಸಿದ ಬ್ಯಾಗ್‌ ಇನ್ನಿತರ ವಸ್ತುಗಳು ಸಹಿತ ನಗದು ರೂಪಾಯಿ 7130 ಅನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 7,86,330 ಲಕ್ಷದ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ವಿಚಾರಣೆ ವೇಳೆ ಎಂಡಿಎಂ ಪೌಡರ್‌ ಅನ್ನು ಬೆಂಗಳೂರಿನಿಂದ ಖರೀದಿಸಿರುವುದಾಗಿ ಆರೋಪಿ ಪ್ರೇಮ್‌ ತಿಳಿಸಿದ್ದಾನೆ. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article