ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವು

ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವು

ಕಾರವಾರ: ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

ನವೀನ ನಾರಾಯಣ ಬೆಳಗಾಂವಕರ್ (13) ಸಾವಿಗಿಡಾದ ವಿದ್ಯಾರ್ಥಿ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ. 

ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೇ ಕೊನೆಯುಸಿರೆಳೆದಿದ್ದಾನೆ.

Ads on article

Advertise in articles 1

advertising articles 2

Advertise under the article