ಶಂಕರನಾರಾಯಣ ಗುಮ್ಮಲ ಡ್ಯಾಂಗೆ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು
Sunday, December 1, 2024
ಶಂಕರನಾರಾಯಣ: ಬೆಳ್ವೆ ಸಮೀಪದ ಗುಮ್ಮಲ ಎಂಬಲ್ಲಿರುವ ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ(13) ಹಾಗೂ ಪ್ರಜ್ವಲ್(14) ಎಂದು ಗುರುತಿಸಲಾಗಿದೆ. ಶ್ರೀಶ ಹೆಬ್ರಿಯ ಎಸ್‌ಆರ್‌ಎಸ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದನು.
ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ ಮನೆ ಸಮೀಪದ ಡ್ಯಾಂಗೆ ಈಜಲು ಹೋಗಿದ್ದರು. ಈ ವೇಳೆ ಶ್ರೀಶ ಹಾಗೂ ಪ್ರಜ್ವಲ್ ಅಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಸ್ಥಳಕ್ಕೆ ಶಂಕರ ನಾರಾಯಣ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.