ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಬೈಕಿನಲ್ಲಿದ್ದ ಮೂವರು ಬಲಿ
Tuesday, December 31, 2024
ಉತ್ತರ ಕನ್ನಡ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆಯ ಮೇಲೆ ನಡೆದಿದೆ.
ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಭಟ್ಕಳ ತಾಲೂಕಿನ ರಾಘವೇಂದ್ರ ಸೋಮಯ್ಯ ಗೌಡ(34), ಗೌರೀಶ್ ನಾಯ್ಕ್(25) ಮತ್ತು ರಮೇಶ್ ನಾಯ್ಕ್ (22) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.