ನಿಮ್ಮ ಶುಗರ್ ಲೆವೆಲ್ ಕಂಟ್ರೋಲ್ ಬರಬೇಕೇ..? ಈ ತರಕಾರಿಯನ್ನು ತಿನ್ನಲು ಆರಂಭಿಸಿ...

ನಿಮ್ಮ ಶುಗರ್ ಲೆವೆಲ್ ಕಂಟ್ರೋಲ್ ಬರಬೇಕೇ..? ಈ ತರಕಾರಿಯನ್ನು ತಿನ್ನಲು ಆರಂಭಿಸಿ...

ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಮಧುಮೇಹಿ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧವರೆಗೂ ಈ ಕಾಯಿಲೆಯೂ ಕಾಡುತ್ತಿದೆ. ಈ ಆರೋಗ್ಯ ಸಮಸ್ಯೆಯಿರುವವರು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ಸೇವಿಸುವ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಹೀಗಾಗಿ ಈ ಸೌತೆಕಾಯಿಯನ್ನು ಆಹಾರ ಭಾಗವಾಗಿ ಮಾಡಿಕೊಳ್ಳುವುದು ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬಹಳಷ್ಟು ಪ್ರಯೋಜನಕಾರಿಯಾಗಿದೆ.

ಸೌತೆಕಾಯಿ ಮಧುಮೇಹಿಗಳಿಗೆ ಎಷ್ಟು ಸಹಕಾರಿ?

* ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮೂತ್ರ ವಿಸರ್ಜನೆಯ ಸಮಸ್ಯೆಯೂ ಹೆಚ್ಚಾಗಿ ಕಾಡುತ್ತದೆ. ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಹೀಗಾಗಿ ಸೌತೆಕಾಯಿಯಲ್ಲಿ ನಿಯಮಿತವಾದ ಸೇವನೆಯೂ ದೇಹದಲ್ಲಿನ ನೀರಿನ ಕೊರತೆಯನ್ನು ನೀಗಿಸುತ್ತದೆ.

* ಸಾಮಾನ್ಯವಾಗಿ ತೂಕ ಹೆಚ್ಚಾಗುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವ ಸಾಧ್ಯತೆಯಿರುತ್ತದೆ. ಹೀಗಾಗಿ ಸೌತೆಕಾಯಿಯನ್ನು ಸೇವಿಸುವುದರಿಂದ ಬೊಜ್ಜು ನಿವಾರಣೆಯಾಗಿ ತೂಕವನ್ನು ನಿಯಂತ್ರಿಸುತ್ತದೆ. ಒಂದು ವೇಳೆ ದೇಹದಲ್ಲಿ ಬೊಜ್ಜು ಹೆಚ್ಚಾದರೆ ಸಕ್ಕರೆ ಕಾಯಿಲೆ ಬರುವ ಸಾಧ್ಯತೆಯಿದ್ದು, ಈ ತರಕಾರಿಯೂ ಬೊಜ್ಜಿನ ಅಪಾಯವನ್ನು ಕಡಿಮೆ ಮಾಡುತ್ತದೆ.

* ಸೌತೆಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಇದರ ನಿಯಮಿತ ಸೇವನೆಯೂ ದೇಹಕ್ಕೆ ಶಕ್ತಿಯನ್ನು ನೀಡುವುದರೊಂದಿಗೆ ದೀರ್ಘಕಾಲದ ಕಾಯಿಲೆಗಳ ಅಪಾಯ ಮಟ್ಟವನ್ನು ಕಡಿಮೆ ಮಾಡುತ್ತದೆ.

* ಸೌತೆಕಾಯಿಯಲ್ಲಿ ಫೈಬರ್ ಪ್ರಮಾಣವು ಅಧಿಕವಾಗಿದ್ದು, ಇದು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಆಹಾರವನ್ನು ಜೀರ್ಣಗೊಳಿಸಿ ಹೊಟ್ಟೆಯ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುತ್ತದೆ.

* ಮದುಮೇಹಿಗಳಲ್ಲಿ ಕಣ್ಣಿನ ಸಮಸ್ಯೆಯೂ ಹೆಚ್ಚಿರುತ್ತದೆ. ಆದರೆ ಈ ಸೌತೆಕಾಯಿಯಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು, ಇದರ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಕಣ್ಣಿನ ದೃಷ್ಟಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

ಸೌತೆಕಾಯಿಯನ್ನು ಈ ರೀತಿ ದಿನನಿತ್ಯ ಸೇವಿಸಿ

* ಸೌತೆಕಾಯಿ ಸೂಪ್ : ಸೌತೆಕಾಯಿ ಸೂಪ್ ಮಾಡಿ ಸೇವಿಸುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಹೀಗಾಗಿ ಕತ್ತರಿಸಿಟ್ಟ ಸೌತೆಕಾಯಿಗೆ ಒಂದೆರಡು ಚಮಚ ನಿಂಬೆ ರಸ, ಒಂದು ಈರುಳ್ಳಿ, ಬೆಳ್ಳುಳ್ಳಿ, ಕಾಲು ಚಮಚ ಆಲಿವ್ ಎಣ್ಣೆ, ಅರ್ಧ ಕಪ್ ಕೊತ್ತಂಬರಿ ಸೊಪ್ಪು, ಒಂದು ಚಮಚ ಜೀರಿಗೆ, ಉಪ್ಪು ಮತ್ತು ಮೆಣಸು ಪುಡಿ ಸೇರಿಸಿ ಮಿಶ್ರಣ ಮಾಡಿಕೊಳ್ಳಿ. ಅಗತ್ಯವಿದ್ದಷ್ಟು ಮೊಸರು ಸೇರಿಸಿ ಸೇವಿಸಿದರೆ ಆರೋಗ್ಯದಲ್ಲಿ ಬದಲಾವಣೆವನ್ನು ಕಾಣಬಹುದು.

* ಸೌತೆಕಾಯಿ ಸಲಾಡ್ : ಮದ್ಯಾಹ್ನ ಇಲ್ಲವಾದರೆ ರಾತ್ರಿ ಊಟಕ್ಕೆ ಸೈಡ್ ಡಿಶ್ ಆಗಿ ಸೌತೆಕಾಯಿ ಸಲಾಡ್ ಮಾಡಿ ಸೇವಿಸಬಹುದು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

* ಸೌತೆಕಾಯಿ ಕೋಸಂಬರಿ : ಸೌತೆಕಾಯಿಯನ್ನು ತುರಿದು ಮತ್ತು ಮೊಸರಿನಲ್ಲಿ ಬೆರೆಸಿ, ರುಚಿಗೆ ತಕ್ಕಂತೆ ಕಪ್ಪು ಉಪ್ಪು ಸೇರಿಸಿಕೊಳ್ಳಿ. ಇದನ್ನು ದಿನನಿತ್ಯ ಸೇವನೆ ಮಾಡುವುದರಿಂದ ಶುಗರ್ ಲೆವೆಲ್ ನಿಯಂತ್ರಣದಲ್ಲಿರಿಸಿಕೊಳ್ಳಬಹುದು.

Ads on article

Advertise in articles 1

advertising articles 2

Advertise under the article