ಹೆಜಮಾಡಿಯಲ್ಲಿ ಅಮವಾಸ್ಯೆಯಂದು ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
Monday, December 30, 2024
ಉಡುಪಿ: ಅಮವಾಸ್ಯೆಯಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮೃತರನ್ನು ಹೆಜಮಾಡಿಯ ಅಕ್ಷಯ್ ಮತ್ತು ಚಿರಾಗ್ ಅಮೀನ್ ಎಂದು ಗುರುತಿಸಲಾಗಿದೆ. ಎಳ್ಳಾಮವಾಸ್ಯೆ ಪ್ರಯುಕ್ತ ಆರು ಮಂದಿ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದರು. ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ 6 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನುಳಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಅಮವಾಸ್ಯೆಯಂದೇ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ.