ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಸಾಯನಿಕ ತುಂಬಿದ್ದ ಟ್ರಕ್ ಡಿಕ್ಕಿ; ಐವರು ಸಜೀವ ದಹನ; 37 ಮಂದಿ ಗಾಯ; 30 ಟ್ರಕ್‌ಗಳು ಮತ್ತು ಇತರ ವಾಹನಗಳು ಬೆಂಕಿಗಾಹುತಿ

ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಸಾಯನಿಕ ತುಂಬಿದ್ದ ಟ್ರಕ್ ಡಿಕ್ಕಿ; ಐವರು ಸಜೀವ ದಹನ; 37 ಮಂದಿ ಗಾಯ; 30 ಟ್ರಕ್‌ಗಳು ಮತ್ತು ಇತರ ವಾಹನಗಳು ಬೆಂಕಿಗಾಹುತಿ

ಜೈಪುರ: ರಾಜಸ್ತಾನದ ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ರಾಸಾಯನಿಕ ತುಂಬಿದ್ದ ಟ್ರಕ್ ಇತರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಜೀವ ದಹನವಾಗಿದ್ದು, 37 ಮಂದಿ ಗಾಯಗೊಂಡಿದ್ದಾರೆ.

ಸುಮಾರು 30 ಟ್ರಕ್‌ಗಳು ಮತ್ತು ಇತರ ವಾಹನಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ. ದುರ್ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. 37 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಕಮಿಷನರ್ ಬಿಜು ಜಾರ್ಜ್ ಜೋಸೆಫ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಗಾಯಾಳುಗಳು ದಾಖಲಾಗಿರುವ ಎಸ್‌ಎಂಎಸ್ ಆಸ್ಪತ್ರೆಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಭೇಟಿ ನೀಡಿ ಅಲ್ಲಿನ ವೈದ್ಯರೊಂದಿಗೆ ಮಾತನಾಡಿದರು. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಭಂಕ್ರೋಟಾದ ಎಸ್‌ಎಚ್‌ಒ ಮನೀಷ್ ಗುಪ್ತಾ, ಬೆಂಕಿಯನ್ನು ನಿಯಂತ್ರಿಸಲು ತುಂಬಾ ಕಷ್ಟವಾಯಿತು. ಅಗ್ನಿಶಾಮಕ ದಳದ ತಂಡಗಳು ಬೆಂಕಿ ಹೊತ್ತಿಕೊಂಡ ವಾಹನಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಪ್ರದೇಶದಲ್ಲಿ ಮೂರು ಪೆಟ್ರೋಲ್ ಪಂಪ್‌ಗಳಿದ್ದವು ಆದರೆ ಅದೃಷ್ಟವಶಾತ್ ಅವುಗಳಿಗೆ ಹಾನಿಯಾಗಿಲ್ಲ ಎಂದರು. 25ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿ ಸಂತ್ರಸ್ತರನ್ನು ಆಸ್ಪತ್ರೆಗೆ ರವಾನಿಸಿವೆ.

ಅಪಘಾತ ಸ್ಥಳದಿಂದ ಸುಮಾರು 300 ಮೀಟರ್‌ ಉದ್ದದ ಹೆದ್ದಾರಿ ಹಾನಿಗೀಡಾಗಿದೆ. ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಉದ್ದನೆಯ ಸರತಿ ಸಾಲಿನಲ್ಲಿ ನಿಂತಿವೆ.

Ads on article

Advertise in articles 1

advertising articles 2

Advertise under the article