ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಜೋ ರೂಟ್!
ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಜೋ ರೂಟ್ 23 ರನ್ ಬಾರಿಸಿದ್ದರು. ಈ ಇಪ್ಪತ್ತಮೂರು ರನ್ಗಳೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 4ನೇ ಇನಿಂಗ್ಸ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ನಾಲ್ಕನೇ ಇನಿಂಗ್ಸ್ನಲ್ಲಿ ಒಟ್ಟು 60 ಬಾರಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 1625 ರನ್ ಕಲೆಹಾಕುವ ಮೂಲಕ ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ.
ನಾಲ್ಕನೇ ಇನಿಂಗ್ಸ್ನಲ್ಲಿ 49 ಬಾರಿ ಬ್ಯಾಟಿಂಗ್ ಮಾಡಿರುವ ಜೋ ರೂಟ್ ಈವರೆಗೆ 1630 ರನ್ ಕಲೆಹಾಕಿದ್ದಾರೆ. ಈ ಮೂಲಕ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ನಾಲ್ಕನೇ ಇನಿಂಗ್ಸ್ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರೂಟ್ ತಮ್ಮದಾಗಿಸಿಕೊಂಡಿದ್ದಾರೆ.
ಸದ್ಯ 150 ಟೆಸ್ಟ್ ಪಂದ್ಯಗಳ ಮೂಲಕ 12,777 ರನ್ ಕಲೆಹಾಕಿರುವ ಜೋ ರೂಟ್ ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು, ಸಚಿನ್ ತೆಂಡೂಲ್ಕರ್ (15,921 ರನ್ಸ್) ಅವರ ವಿಶ್ವ ದಾಖಲೆ ಮುರಿಯಲು ಇನ್ನೂ 3144 ರನ್ಗಳ ಅವಶ್ಯಕತೆಯಿದೆ.