ಸಚಿವ ಈಶ್ವರ್ ಖಂಡ್ರೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ: ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅನ್ಸಾಫ್
Monday, December 23, 2024
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಇದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ,
ಮಾನ್ಯ ಅರಣ್ಯ , ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆಯವರು ಕುಟುಂಬ ಸಮೇತರಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ದೇವಸ್ಥಾನ ಹಾಗೂ ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಭೇಟಿಗೆಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಕೈಗೊಂಡಿದ್ದಾರೆ.
ಈಶ್ವರ್ ಖಂಡ್ರೆ ಸುಪುತ್ರ ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ್ ಖಂಡ್ರೆ ಹಾಗೂ ಧರ್ಮಪತ್ನಿ ಗೀತಾ ಖಂಡ್ರೆಯವರು ಜತೆಗಿದ್ದರು.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಈಶ್ವರ್ ಖಂಡ್ರೆಯವರ ಆಪ್ತರಾದ ಮಂಗಳೂರು ಮೂಲದ ಅನ್ಸಾಫ್ ರವರು ಖಂಡ್ರೆ ಪರಿವಾರವನ್ನು ಸ್ವಾಗತಿಸಿ ಬರಮಾಡಿಕೊಂಡರು.