HSRP ನಂಬರ್ ಪ್ಲೇಟ್ ಅಳವಡಿಕೆಗೆ ವಿಧಿಸಿದ್ದ ಗಡುವು ಮತ್ತೆ ವಿಸ್ತರಣೆ!

HSRP ನಂಬರ್ ಪ್ಲೇಟ್ ಅಳವಡಿಕೆಗೆ ವಿಧಿಸಿದ್ದ ಗಡುವು ಮತ್ತೆ ವಿಸ್ತರಣೆ!




ಬೆಂಗಳೂರು: ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೌದು.. ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್​ಪಿ​ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಇದೀಗ ಸಾರಿಗೆ ಇಲಾಖೆ ಈ ವರ್ಷದ ಕೊನೆಯ (ಡಿಸೆಂಬರ್ 31) ದಿನದ ವರೆಗೆ ಗಡುವು ನೀಡಿದೆ.

ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ನಾಟಕದಲ್ಲಿರುವ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳು, ಕೇವಲ 55 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿವೆ. ಹೀಗಾಗಿ 01-04-2019 ರ ಹಿಂದಿನ ಎಲ್ಲಾ ವಾಹನಗಳು ಡಿಸೆಂಬರ್ 31ರೊಳಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಈ ಮೂಲಕ ಐದನೇ ಬಾರಿಗೆ ಗಡವು ವಿಸ್ತರಿಸಿದೆ.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?

https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು. ಇಲ್ಲಿ Book HSRP ಕ್ಲಿಕ್ ಮಾಡಿ.

ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿ.

ನಿಮ್ಮ ವಾಹನದ ವಿವರವನ್ನು ಅಲ್ಲಿ ನಮೂದಿಸಿ.

ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿ

HSRP ನಂಬರ್ ಪ್ಲೇಟ್‌ಗೆ ಅಲ್ಲಿ ನಮೂದಿಸಿದ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡಿ

ಮೊಬೈಲ್ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ

HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ಪಡೆದುಕೊಳ್ಳಿ.

Ads on article

Advertise in articles 1

advertising articles 2

Advertise under the article